10
ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು
ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ * 10:1 ವಿಮೋ 13:21ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು. 10:2 ವಿಮೋ 14:22ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅವರೆಲ್ಲರೂ 10:3 ಯೋಹಾ 6:31ಆತ್ಮೀಕವಾದ § 10:3 ವಿಮೋ 16:15,35ಒಂದೇ ಆಹಾರವನ್ನು ತಿಂದರು. * 10:4 ವಿಮೋ 17:6 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ. ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. 10:5 ಅರಣ್ಯ 14:16,19ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು. 10:6 ಅರಣ್ಯ 11:4,33; ಕೀರ್ತ 106:14ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, § 10:7 ವಿಮೋ 32:6“ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. * 10:7 1 ಕೊರಿ 10:14ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ. 10:8 ಅರಣ್ಯ 25:1-9ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. 10:8 1 ಕೊರಿ 6:18ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. § 10:9 ಅರಣ್ಯ 21:5,6ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. 10  * 10:10 ಅರಣ್ಯ 14:2, 29-37ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ. 11 ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು 10:11 ರೋಮಾ. 4:23,24ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. 12  10:12 ರೋಮಾ. 11:20ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ. 13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. § 10:13 1 ಕೊರಿ 1:9ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ * 10:13 2 ಪೇತ್ರ. 2:9ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆ
14 ಆದ್ದರಿಂದ ಪ್ರಿಯರೇ, 10:14 1 ಕೊರಿ 10:7ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. 15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ. 16  10:16 ಮತ್ತಾ 26:27,28ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? § 10:16 ಮತ್ತಾ 26:27; 1 ಕೊರಿ 11:23,24ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? 17 ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು * 10:17 1 ಕೊರಿ 12:12,13; ರೋಮಾ. 12:5; ಕೊಲೊ 3:15ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ. 18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. 10:18 ಯಾಜ 3:7,15ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ. 19 ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು 10:19 ಅಥವಾ ವಿಶೇಷವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, 20 ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, § 10:20 ಧರ್ಮೋ 32:17, ಕೀರ್ತ 106:37ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. 21  * 10:21 2 ಕೊರಿ 6:15,16ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. 22  10:22 ಧರ್ಮೋ 32:21ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು
23  10:23 1 ಕೊರಿ 6:18; 8:9“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. 24  § 10:24 ವ 33 ನೋಡಿರಿಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ. 25  * 10:25 1 ಕೊರಿ 8:7:ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. 26  10:26 ಕೀರ್ತ 24:1; ಕೀರ್ತ 50:12“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” 27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. 28 ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. 29  10:29 1 ಕೊರಿ 8:9-12:ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. § 10:29 ರೋಮಾ. 14:16:ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? 30 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು? 31 ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ * 10:31 1 ಕೊರಿ 9:22:ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ. 32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. 33 ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

*10:1 10:1 ವಿಮೋ 13:21

10:2 10:2 ವಿಮೋ 14:22

10:3 10:3 ಯೋಹಾ 6:31

§10:3 10:3 ವಿಮೋ 16:15,35

*10:4 10:4 ವಿಮೋ 17:6

10:5 10:5 ಅರಣ್ಯ 14:16,19

10:6 10:6 ಅರಣ್ಯ 11:4,33; ಕೀರ್ತ 106:14

§10:7 10:7 ವಿಮೋ 32:6

*10:7 10:7 1 ಕೊರಿ 10:14

10:8 10:8 ಅರಣ್ಯ 25:1-9

10:8 10:8 1 ಕೊರಿ 6:18

§10:9 10:9 ಅರಣ್ಯ 21:5,6

*10:10 10:10 ಅರಣ್ಯ 14:2, 29-37

10:11 10:11 ರೋಮಾ. 4:23,24

10:12 10:12 ರೋಮಾ. 11:20

§10:13 10:13 1 ಕೊರಿ 1:9

*10:13 10:13 2 ಪೇತ್ರ. 2:9

10:14 10:14 1 ಕೊರಿ 10:7

10:16 10:16 ಮತ್ತಾ 26:27,28

§10:16 10:16 ಮತ್ತಾ 26:27; 1 ಕೊರಿ 11:23,24

*10:17 10:17 1 ಕೊರಿ 12:12,13; ರೋಮಾ. 12:5; ಕೊಲೊ 3:15

10:18 10:18 ಯಾಜ 3:7,15

10:19 10:19 ಅಥವಾ ವಿಶೇಷ

§10:20 10:20 ಧರ್ಮೋ 32:17, ಕೀರ್ತ 106:37

*10:21 10:21 2 ಕೊರಿ 6:15,16

10:22 10:22 ಧರ್ಮೋ 32:21

10:23 10:23 1 ಕೊರಿ 6:18; 8:9

§10:24 10:24 ವ 33 ನೋಡಿರಿ

*10:25 10:25 1 ಕೊರಿ 8:7:

10:26 10:26 ಕೀರ್ತ 24:1; ಕೀರ್ತ 50:12

10:29 10:29 1 ಕೊರಿ 8:9-12:

§10:29 10:29 ರೋಮಾ. 14:16:

*10:31 10:31 1 ಕೊರಿ 9:22: