೧೩
೧ ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. * ಧರ್ಮೋ. 19:15; ಅರಣ್ಯ. 35:30ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು, ಎಂದು ಲಿಖಿತವಾಗಿದೆ. ೨ ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ † 2 ಕೊರಿ. 13:10; 1 ಕೊರಿ. 4:21ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ:‡ 2 ಕೊರಿ. 12:21ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. ೩ ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ § 2 ಕೊರಿ. 10:4ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. ೪ * ಫಿಲಿ. 2:7,8; 1 ಪೇತ್ರ 3:18ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; † ರೋಮಾ. 1:4; 6:4ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ‡ 2 ಕೊರಿ. 12:10ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, § ರೋಮಾ. 6:8ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
೫ ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ನೀವು ಒಳ್ಳೆಯವರಾಗಿದ್ದರೆ, * ರೋಮಾ. 8:10; ಗಲಾ. 4:19ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆ ಪರೀಕ್ಷಿಗೆ ಒಳ್ಳಗಾದವರೇ. ೬ ನಾವಂತೂ ಆ ಪರೀಕ್ಷಿಗೆ ಒಳ್ಳಗಾದವರೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. ೭ ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷಿಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷಿಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. ೮ ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. ೯ † 1 ಕೊರಿ. 4:10; 2 ಕೊರಿ. 4:12; 12:5; 9:10ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
೧೦ ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ‡ 2 ಕೊರಿ. 10:8ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ § 2 ಕೊರಿ. 2:3ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.
ಕಡೆ ಮಾತುಗಳು
೧೧ ಕಡೆಯದಾಗಿ ಪ್ರಿಯರೇ, * ನಿಮಗೆ ಕ್ಷೇಮವಾಗಲಿಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, † ರೋಮಾ. 12:16ಏಕ ಮನಸ್ಸುಳ್ಳವರಾಗಿರಿ, ‡ ಮಾರ್ಕ. 9:50ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, § ರೋಮಾ. 15:33ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. ೧೨ * ರೋಮಾ. 16:16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ೧೩ † ಫಿಲಿ. 4:22ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. ೧೪ ‡ ರೋಮಾ. 16:20; 1 ಕೊರಿ. 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, § ಯೂದ. 21ದೇವರ ಪ್ರೀತಿಯೂ, * ಫಿಲಿ. 2:1ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
*೧೩:೧ ಧರ್ಮೋ. 19:15; ಅರಣ್ಯ. 35:30
†೧೩:೨ 2 ಕೊರಿ. 13:10; 1 ಕೊರಿ. 4:21
*೧೩:೪ ಫಿಲಿ. 2:7,8; 1 ಪೇತ್ರ 3:18
†೧೩:೪ ರೋಮಾ. 1:4; 6:4
§೧೩:೪ ರೋಮಾ. 6:8
*೧೩:೫ ರೋಮಾ. 8:10; ಗಲಾ. 4:19
†೧೩:೯ 1 ಕೊರಿ. 4:10; 2 ಕೊರಿ. 4:12; 12:5; 9:10
*೧೩:೧೧ ನಿಮಗೆ ಕ್ಷೇಮವಾಗಲಿ
†೧೩:೧೧ ರೋಮಾ. 12:16
§೧೩:೧೧ ರೋಮಾ. 15:33
*೧೩:೧೨ ರೋಮಾ. 16:16
†೧೩:೧೩ ಫಿಲಿ. 4:22
‡೧೩:೧೪ ರೋಮಾ. 16:20; 1 ಕೊರಿ. 16:23
§೧೩:೧೪ ಯೂದ. 21
*೧೩:೧೪ ಫಿಲಿ. 2:1