2 Timothy
ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ
ಪೌಲನು ತಿಮೊಥೆಯನಿಗೆ ಬರೆದ ಎರಡನೇ ಪತ್ರಿಕೆ
೧
ಪೀಠಿಕೆ
೧ ಕ್ರಿಸ್ತಯೇಸುವಿನಲ್ಲಿರುವ
*ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ
†ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ
‡ಅಪೊಸ್ತಲನಾದ ಪೌಲನು,
೨ §ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ,
*ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ
೩ †ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ
‡ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ.
§ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ
*ಸ್ತೋತ್ರಸಲ್ಲಿಸುತ್ತೇನೆ.
೪ ನಾನು
†ನಿನ್ನ ಕಣ್ಣೀರನ್ನು ನೆನಪಿಗೆ ತಂದು
‡ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.
೫ ನಿನ್ನಲ್ಲಿರುವ
§ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ
*ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
೬ ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ
†ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
೭ ದೇವರು ನಮಗೆ ಕೊಟ್ಟಿರುವ ಆತ್ಮವು
‡ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು
§ಹೇಡಿತನದ ಆತ್ಮವಲ್ಲ.
೮ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ
*ಸಾಕ್ಷಿಯ ವಿಷಯದಲ್ಲಾಗಲಿ ಆತನ
†ಸೆರೆಯವನಾದ ನನ್ನ ವಿಷಯದಲ್ಲಾಗಲಿ
‡ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ
§ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
೯ *ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ,
†ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ
‡ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು
§ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
೧೦ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ
*ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ.
†ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.
೧೧ ‡ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.
೧೨ §ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ.
*ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು
†ಆತನು
‡ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
೧೩ ನೀನು
§ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ
*ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
೧೪ †ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು
‡ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.
೧೫ §ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
೧೬ *ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು.
†ನನ್ನ ಬೇಡಿಗಳಿಗೆ ನಾಚಿಕೆಪಡದೆ,
೧೭ ರೋಮಾಪುರಕ್ಕೆ ಬಂದಕೂಡಲೆ
‡ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
೧೮ ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.