ಭಕ್ತರ ದೀನಭಾವ
೧೩೧
ಯಾತ್ರಾಗೀತೆ; ದಾವೀದನದು.
(ಜ್ಞಾನೋ. 23:26; ಮತ್ತಾಯನು 18:3)
 
೧ ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;
ನನಗೆ ಸೊಕ್ಕಿನ ಕಣ್ಣುಗಳಿಲ್ಲ;
ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
೨ ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;
ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
೩ ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ
ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.