35
ರೇಕಾಬ್ಯರ ಒಂದು ಒಳ್ಳೆಯ ದೃಷ್ಟಾಂತ
ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು: “ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ* ರೇಕಾಬನ ಕುಟುಂಬ ರೇಕಾಬನ ಮಗನಾದ ಯೋನಾದಾಬನ ವಂಶಕ್ಕೆ ಸೇರಿದ ಜನರು. ಈ ಕುಟುಂಬದವರು ಯೆಹೋವನಿಗೆ ನಂಬಿಗಸ್ತರಾಗಿದ್ದರು. ಯೋನಾದಾಬನ ಚರಿತ್ರೆ 2 ರಾಜರುಗಳು 10:15-28 ರಲ್ಲಿದೆ. ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”
ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ ಯೆರೆಮೀಯ ಪ್ರವಾದಿಯಾದ ಯೆರೆಮೀಯನಲ್ಲ. ಇವನು ಬೇರೆ ವ್ಯಕ್ತಿ. ಮಗ. ಯೆರೆಮೀಯನು ಹಬಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಬ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು. ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು. ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.
ಆದರೆ ರೇಕಾಬ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು. ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ. ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವದಿಲ್ಲ: ದ್ರಾಕ್ಷಿತೋಟಗಳನ್ನಾಗಲಿ ಹೊಲಗಳನ್ನಾಗಲಿ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವದಿಲ್ಲ. 10 ನಾವು ಗುಡಾರದಲ್ಲಿ ವಾಸಮಾಡಿದ್ದೇವೆ; ನಮ್ಮ ಪೂರ್ವಿಕನಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಆಸಕ್ತಿಯಿಂದ ಮಾಡಿದ್ದೇವೆ. 11 ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
12 ಆಗ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು: 13 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು. 14 ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ. 15 ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ. 16 ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’
17 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’ ”
18 ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.’ 19 ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”

*35:2: ರೇಕಾಬನ ಕುಟುಂಬ ರೇಕಾಬನ ಮಗನಾದ ಯೋನಾದಾಬನ ವಂಶಕ್ಕೆ ಸೇರಿದ ಜನರು. ಈ ಕುಟುಂಬದವರು ಯೆಹೋವನಿಗೆ ನಂಬಿಗಸ್ತರಾಗಿದ್ದರು. ಯೋನಾದಾಬನ ಚರಿತ್ರೆ 2 ರಾಜರುಗಳು 10:15-28 ರಲ್ಲಿದೆ.

35:3: ಯೆರೆಮೀಯ ಪ್ರವಾದಿಯಾದ ಯೆರೆಮೀಯನಲ್ಲ. ಇವನು ಬೇರೆ ವ್ಯಕ್ತಿ.