15
ರಚನೆಗಾರ: ದಾವೀದ.
ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
ಅವನು ದೇವದೂಷಕರನ್ನು ತಿರಸ್ಕರಿಸುವವನೂ
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ
ತನಗೆ ತೊಂದರೆಯಾದರೂ
ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು.
ಹೀಗೆ ಜೀವಿಸುವವನು
ದೇವರಿಗೆ ಸಮೀಪವಾಗಿಯೇ ಇರುತ್ತಾನೆ.* ಹೀಗೆ … ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, “ಅವನು ಎಂದಿಗೂ ಕದಲುವುದಿಲ್ಲ.”
 

*15:5: ಹೀಗೆ … ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, “ಅವನು ಎಂದಿಗೂ ಕದಲುವುದಿಲ್ಲ.”