75
ಸ್ತುತಿಗೀತೆ. ರಚನೆಗಾರ: ಆಸಾಫ.
1 ದೇವರೇ, ನಿನ್ನನ್ನು ಕೊಂಡಾಡುವೆವು!
ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ;
ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ;
ನಾನು ನೀತಿಯಿಂದಲೇ ತೀರ್ಪುಕೊಡುವೆ.
3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ
ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.
4-5 “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ!
ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು.
6 ಭೂಲೋಕದ ಯಾವ ಶಕ್ತಿಯೂ
ಮನುಷ್ಯನನ್ನು ಉದ್ಧಾರ ಮಾಡಲಾರದು.
7 ನ್ಯಾಯಾಧಿಪತಿಯು ದೇವರೇ.
ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ.
ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8 ಯೆಹೋವನ ಕೈಯಲ್ಲಿ ಪಾತ್ರೆಯಿದೆ.
ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ.
ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು;
ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು;
ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು
ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.