45
ಬಾರೂಕನಿಗೆ ಒಂದು ಸಂದೇಶ
1 ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ: 2 “ಇಸ್ರೇಲಿನ ದೇವರಾದ ನಮ್ಮ ಯೆಹೋವನು ಹೀಗೆ ಹೇಳುತ್ತಾನೆ: 3 “ ‘ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ. 4 ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ. 5 ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’ ”