82
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.
ಕೀರ್ತ 58
1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,
ದೇವರುಗಳೆಂದು * 82:1 ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು.ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,
ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
ಸೆಲಾ.
3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
7 ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ”
ಎಂದು ನಾನು ಹೇಳಿದೆನು.
8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.
ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?