೧೧
ತಾನು ಸಾರಿದ ಕ್ರಿಸ್ತನನ್ನು ಕೊರಿಂಥದವರು ಬಿಟ್ಟು ಬೇರೊಂದು ಬೋಧನೆಗೆ ಕಿವಿಗೊಡಬಾರದೆಂದು ಪೌಲನು ಎಚ್ಚರಿಸಿದ್ದು
೧ ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ. ೨ ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ * ಎಫೆ. 5:27, ಪ್ರಕ. 14:ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ. ೩ ಆದರೆ ಆದಿ. 3:4, 1 ತಿಮೊ. 2:14ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ 2 ಕೊರಿ. 6:6ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ. ೪ ಯಾಕೆಂದರೆ ಯಾರಾದರು ಬಂದು § 1 ಕೊರಿ. 3:11ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ * ಗಲಾ. 1:6ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ. ೫  2 ಕೊರಿ. 12:11, ಗಲಾ. 2:6ಅತಿಶ್ರೇಷ್ಟರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ ೬  1 ಕೊರಿ. 1:17ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ § ಎಫೆ. 3:4ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.
ತಾನು ಕೊರಿಂಥದ ಸಭೆಯಿಂದ ಹಣ ಸಹಾಯ ತೆಗೆದುಕೊಳ್ಳದೆ ಹೋದದ್ದಕ್ಕೆ ದೋಷವೆಣಿಸಕೂಡದೆಂದು ಪೌಲನು ಹೇಳುವುದು
೭  * 2 ಕೊರಿ. 12:13, ಅ. ಕೃ. 18:3ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ? ೮ ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. ೯ ನಾನು ನಿಮ್ಮಲ್ಲಿದ್ದಾಗ ಫಿಲಿ. 4:12, 2 ಕೊರಿ. 12:13-14ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಫಿಲಿ. 4:15-16ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. § 2 ಕೊರಿ. 12:16, 1 ಥೆಸ. 2:6ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು. ೧೦  * 1 ಕೊರಿ. 9:15 ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. ೧೧ ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? 2 ಕೊರಿ. 6:11ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು 2 ಕೊರಿ. 11:31, 12:2-3ದೇವರೇ ಬಲ್ಲನು. ೧೨ ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ೧೩ ಆದರೆ ಅಂಥವರು § ಪ್ರಕ. 2:2, ಗಲಾ. 2:4, ಫಿಲಿ. 1:15, 1 ಯೋಹಾ. 4:1ಸುಳ್ಳು ಅಪೊಸ್ತಲರೂ, * ಫಿಲಿ. 3:2ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ೧೪ ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ಗಲಾ. 1:8ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, ೧೫ ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಫಿಲಿ. 3:19ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
ತಾನು ಕ್ರಿಸ್ತನ ಸೇವೆಯಲ್ಲಿ ಪಟ್ಟ ಶ್ರಮೆಯೂ ಕ್ರಿಸ್ತನಿಂದ ಹೊಂದಿದ ದರ್ಶನಗಳೂ ಬಹು ಹೆಚ್ಚೆಂದು ಪೌಲನು ಹೇಳುತ್ತಿರುವುದು
೧೬  § 2 ಕೊರಿ. 12:6 ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ. ೧೭  * 1 ಕೊರಿ, 7:12ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ. ೧೮  ಫಿಲಿ. 3:3-4ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ೧೯  1 ಕೊರಿ. 4:10ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ ೨೦ ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
೨೧  § 2 ಕೊರಿ. 10:10ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ೨೨ ಅವರು ಇಬ್ರಿಯರೋ? * ರೋಮಾ. 11:1, ಫಿಲಿ. 3:5ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು. ೨೩ ಅವರು ಕ್ರಿಸ್ತನ ಸೇವಕರೋ? 2 ಕೊರಿ. 3:6, 10:7, 1 ಕೊರಿ. 15:10ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, 2 ಕೊರಿ. 6:5ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. § 2 ಕೊರಿ. 1:9:, 10:4, 11:6-9, ರೋಮಾ. 8:36, 1 ಕೊರಿ. 15:30-32ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ. ೨೪ ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ * ಧರ್ಮೋ. 25:3ನಲವತ್ತು ಏಟುಗಳು ಬಿದ್ದವು. ೨೫  ಅ. ಕೃ. 16:22ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಅ. ಕೃ. 14:19ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. § ಅ. ಕೃ. 27:41ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. ೨೬ ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, * ಅ. ಕೃ. 9:23, 13:50 5:17, 1 ಥೆಸ. 2:15 ಸ್ವಂತ ಜನರಿಂದ ಅಪಾಯಗಳೂ, ಅ. ಕೃ. 14:5,19,23; 27:42ಅನ್ಯಜನರಿಂದ ಅಪಾಯಗಳೂ, ಅ. ಕೃ. 21:31ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು. ೨೭ ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ೨೮ ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು. ೨೯  § 1 ಕೊರಿ. 8:13, 9:22ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?
೩೦  * 2 ಕೊರಿ. 10:10, 12:5,9 ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ. ೩೧ ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೆಂದು ಬಲ್ಲೆನು. ೩೨  ಅ. ಕೃ. 9:24-25ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು ೩೩ ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.

*೧೧:೨ ಎಫೆ. 5:27, ಪ್ರಕ. 14:

೧೧:೩ ಆದಿ. 3:4, 1 ತಿಮೊ. 2:14

೧೧:೩ 2 ಕೊರಿ. 6:6

§೧೧:೪ 1 ಕೊರಿ. 3:11

*೧೧:೪ ಗಲಾ. 1:6

೧೧:೫ 2 ಕೊರಿ. 12:11, ಗಲಾ. 2:6

೧೧:೬ 1 ಕೊರಿ. 1:17

§೧೧:೬ ಎಫೆ. 3:4

*೧೧:೭ 2 ಕೊರಿ. 12:13, ಅ. ಕೃ. 18:3

೧೧:೯ ಫಿಲಿ. 4:12, 2 ಕೊರಿ. 12:13-14

೧೧:೯ ಫಿಲಿ. 4:15-16

§೧೧:೯ 2 ಕೊರಿ. 12:16, 1 ಥೆಸ. 2:6

*೧೧:೧೦ 1 ಕೊರಿ. 9:15

೧೧:೧೧ 2 ಕೊರಿ. 6:11

೧೧:೧೧ 2 ಕೊರಿ. 11:31, 12:2-3

§೧೧:೧೩ ಪ್ರಕ. 2:2, ಗಲಾ. 2:4, ಫಿಲಿ. 1:15, 1 ಯೋಹಾ. 4:1

*೧೧:೧೩ ಫಿಲಿ. 3:2

೧೧:೧೪ ಗಲಾ. 1:8

೧೧:೧೫ ಫಿಲಿ. 3:19

§೧೧:೧೬ 2 ಕೊರಿ. 12:6

*೧೧:೧೭ 1 ಕೊರಿ, 7:12

೧೧:೧೮ ಫಿಲಿ. 3:3-4

೧೧:೧೯ 1 ಕೊರಿ. 4:10

§೧೧:೨೧ 2 ಕೊರಿ. 10:10

*೧೧:೨೨ ರೋಮಾ. 11:1, ಫಿಲಿ. 3:5

೧೧:೨೩ 2 ಕೊರಿ. 3:6, 10:7, 1 ಕೊರಿ. 15:10

೧೧:೨೩ 2 ಕೊರಿ. 6:5

§೧೧:೨೩ 2 ಕೊರಿ. 1:9:, 10:4, 11:6-9, ರೋಮಾ. 8:36, 1 ಕೊರಿ. 15:30-32

*೧೧:೨೪ ಧರ್ಮೋ. 25:3

೧೧:೨೫ ಅ. ಕೃ. 16:22

೧೧:೨೫ ಅ. ಕೃ. 14:19

§೧೧:೨೫ ಅ. ಕೃ. 27:41

*೧೧:೨೬ ಅ. ಕೃ. 9:23, 13:50 5:17, 1 ಥೆಸ. 2:15

೧೧:೨೬ ಅ. ಕೃ. 14:5,19,23; 27:42

೧೧:೨೬ ಅ. ಕೃ. 21:31

§೧೧:೨೯ 1 ಕೊರಿ. 8:13, 9:22

*೧೧:೩೦ 2 ಕೊರಿ. 10:10, 12:5,9

೧೧:೩೨ ಅ. ಕೃ. 9:24-25