ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು
೨೩
ದಾವೀದನ ಕೀರ್ತನೆ.
೧ ಯೆಹೋವನು ನನಗೆ ಕುರುಬನು; ಕೊರತೆಪಡೆನು.
೨ ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;
ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
೩ ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ
ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
೪ ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
೫ ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;
ನನ್ನನ್ನು ಅಥಿತಿಯಂತ್ತೆ ಸ್ವಿಕರಿಸಿ, ನನ್ನ ತಲೆಗೆ ತೈಲವನ್ನು ಹಚ್ಚಿ ನನ್ನ ಧಣಿವಾರಿಸುವಿ,
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
೬ ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.