೮೨
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.
(ಕೀರ್ತ. 58)
೧ ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,
ಇತರ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ.
೨ “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,
ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
ಸೆಲಾ.
೩ ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
೪ ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
೫ ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
೬ “ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು,
೭ ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ”
ಎಂದು ನಾನು ಹೇಳಿದೆನು.
೮ ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.
ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?