ಯೆಹೋವನೊಬ್ಬನೇ ರಕ್ಷಕನು
೧೨೪
ಯಾತ್ರಾಗೀತೆ; ದಾವೀದನದು.
(ಕೀರ್ತ. 129; ನೆಹೆ. 4:7-23)
 
೧ “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”,
ಎಂದು ಇಸ್ರಾಯೇಲರೇ ಹೇಳಲಿ.
೨ ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,
ಯೆಹೋವನು ನಮಗಿಲ್ಲದಿದ್ದರೆ,
೩ “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,
ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
೪ ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;
ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
೫ ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”
೬ ಯೆಹೋವನಿಗೆ ಕೊಂಡಾಟವಾಗಲಿ;
ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
೭ ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
೮ ಭೂಮಿ, ಆಕಾಶಗಳನ್ನು ಉಂಟುಮಾಡಿದ,
ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.