ಯೆಹೋವನೇ ವಿಶ್ವಾಸಿಗಳ ಆಶ್ರಯ
೧೨೫
ಯಾತ್ರಾಗೀತೆ.
೧ ಯೆಹೋವನಲ್ಲಿ ಭರವಸೆ ಇಡುವವರು,
ಚೀಯೋನ್ ಪರ್ವತದ ಹಾಗೆ ಇದ್ದಾರೆ;
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
೨ ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
೩ ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವುದೇ ಇಲ್ಲ;
ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
೪ ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ,
ಆಗಿರುವವರಿಗೆ ಉಪಕಾರಮಾಡು.
೫ ಯೆಹೋವನು ಡೊಂಕುದಾರಿ ಹಿಡಿದವರನ್ನು,
ಪಾತಕಿಗಳು ಹೋಗುವ ಸ್ತಳಕ್ಕೆ ನಡೆಸುವನು.
ಇಸ್ರಾಯೇಲರಿಗೆ ಶುಭವುಂಟಾಗಲಿ.